ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ
by ಪಾಕ್ಸ್ ಮುಂಡಾಜೆ |ಆಗಸ್ಟ್ 19, 2023 |
ಮುಂಡಾಜೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮುಂಡಾಜೆ 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.
ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಮುಂಡಾಜೆ ಸಿಎ ಬ್ಯಾಂಕಿನ ಅಧ್ಯಕ್ಷ ಜನಾರ್ದನ ಗೌಡ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಮುಂಡಾಜೆ ಸಿಎ ಬ್ಯಾಂಕಿನ ನಿರ್ದೇಶಕರುಗಳು ಉಪಸ್ಥಿತರಿದ್ದರು.